ಕರಾವಳಿಯ ಪ್ರಸಿದ್ಧ ದೇವಸ್ಥಾನ ಕಾಪು ಹೊಸ ಮಾರಿಗುಡಿಗೆ ‘CID’ ತಂಡ ಭೇಟಿ

admin

ಕಾಪು: ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ‘CID’ ತಂಡ ಸೆಪ್ಟೆಂಬರ್ 30ರ ಬುಧವಾರ ಭೇಟಿ ನೀಡಿದೆ.
ತಬ್ಬಿಬ್ಬಾಗುವಂತದ್ದೇನಿಲ್ಲ.. ಅಸಲಿಗೆ ಸೋನಿ ಟಿವಿಯ ಜನಪ್ರಿಯ ಧಾರಾವಾಹಿ ‘CID’ ಚಿತ್ರೀಕರಣದ ಕಲಾವಿದರು ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

ಧಾರಾವಾಹಿಯ ಚಿತ್ರೀಕರಣಕ್ಕಾಗಿ ಉಡುಪಿ–ಮಂಗಳೂರು ಭಾಗಕ್ಕೆ ಆಗಮಿಸಿದ್ದ ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ , ಶಿವಾಜಿ ಸತಮ್ ಹಾಗೂ ಅನ್ಶಾ ಸಯ್ಯದ್ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು.

ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ರವೀಂದ್ರ ಮಲ್ಲಾರ್, ಪ್ರಚಾರ ಸಮಿತಿ ಸಂಚಾಲಕ ಜಯರಾಮ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ದೇವಸ್ಥಾನದ ವಿಶೇಷತೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು CID ತಂಡದ ಸದಸ್ಯರಿಗೆ ಮಾಹಿತಿ ನೀಡಲಾಯಿತು.
ದಯಾನಂದ ಶೆಟ್ಟಿಯವರು 99 ಶಿಲೆಯನ್ನು ದೇವಳದ ಸಮಗ್ರ ಜಿರ್ಣೋದ್ಧಾರಕ್ಕಾಗಿ ನೀಡಿದರು, ಶಿವಾಜಿ ಮತ್ತು ಅನ್ಶಾ ಕಾಪುವಿನ ಅಮ್ಮನಿಗೆ ಸೀರೆಯನ್ನು ಸಮರ್ಪಿಸಿದರು.

ಬಳಿಕ ದೇವಸ್ಥಾನದ ಆವರಣದಲ್ಲಿ ಕೆಲಕಾಲ ಸಮಯ ಕಳೆದ ಅವರು, ಕಾಪು ಶ್ರೀ ಹೊಸ ಮಾರಿಗುಡಿ ಕ್ಷೇತ್ರದ ವಾತಾವರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *