ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸುಳೆ ಮುರ್ಕಿ ಕ್ರಾಸ್ ಬಳಿ ಶಾಲಾ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾದ
ಭೀಕರ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೈಸೂರಿನ 15 ವರ್ಷ ಪ್ರಾಯದ ಶಾಲಾ ಬಾಲಕ ಪವನ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ 26 ಮಂದಿ ಬಾಲಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ತಕ್ಷಣ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಗೋಕರ್ಣ ಪ್ರವಾಸಕ್ಕೆ ಹೋಗುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರಣ ಈ ಘಟನೆ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ.
ಹೊನ್ನಾವರ: ಶಾಲಾ ವಾಹನ ಪಲ್ಟಿ; ಓರ್ವ ವಿದ್ಯಾರ್ಥಿ ಸಾವು

Leave a Comment

